Sunday, June 4, 2023

Latest Posts

CINE| ಬಾಹುಬಲಿ ಸೆಂಟಿಮೆಂಟ್ ಫಾಲೋ ಮಾಡಿದ ಆದಿಪುರುಷ್:‌ ಅಲ್ಲಿಯೇ ಪ್ರೀ-ರಿಲೀಸ್ ಈವೆಂಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಭಾಸ್ ಅಭಿನಯದ ಆದಿಪುರುಷ ಚಿತ್ರಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರದಲ್ಲಿ, ಕೃತಿ ಸನನ್ ಸೀತೆಯ ಪಾತ್ರದಲ್ಲಿ ಮತ್ತು ಸೈಫ್ ಅಲಿ ಖಾನ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರತಂಡ ಈ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿದೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಈ ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಸಿನಿಮಾದ ಅಭಿಮಾನಿಗಳನ್ನು ಆಕರ್ಷಿಸಿವೆ. ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಪ್ಲಾನ್ ಮಾಡಿದ್ದಾರೆ ನಿರ್ಮಾಪಕರು.

ಜೂನ್ 6 ರಂದು ತಿರುಪತಿಯಲ್ಲಿ ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಆದರೆ ಇದಕ್ಕೂ ಮುನ್ನ ಪ್ರಭಾಸ್ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಸಿನಿಮಾ ಬಾಹುಬಲಿ ಪ್ರೀ ರಿಲೀಸ್ ಕಾರ್ಯಕ್ರಮ ಕೂಡ ತಿರುಪತಿಯಲ್ಲಿ ನಡೆದಿತ್ತು. ಈಗ ಅದೇ ಸ್ಥಳದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಬಾಹುಬಲಿ ಸೆಂಟಿಮೆಂಟ್ ವರ್ಕ್ ಔಟ್ ಆಗಲಿದೆ ಎಂಬ ನಿರೀಕ್ಷೆ ಅಭಿಮಾನಿಗಳದ್ದು.

ಏತನ್ಮಧ್ಯೆ, ಈ ಪ್ರಿ-ರಿಲೀಸ್ ಈವೆಂಟ್‌ಗೆ ಯಾರು ಅತಿಥಿಯಾಗಲಿದ್ದಾರೆ ಎಂದು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರ ಜೂನ್ 16 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಬಾಲಿವುಡ್‌ನ ದೊಡ್ಡ ನಿರ್ಮಾಣ ಸಂಸ್ಥೆಯಾದ ಟಿ ಸೀರಿಸ್ ಮತ್ತು ರೆಟ್ರೋಫೈಲ್ಸ್ ಸಹಯೋಗದಲ್ಲಿ 600 ಕೋಟಿ ಬಜೆಟ್‌ನಲ್ಲಿ ಚಿತ್ರವನ್ನು ನಿರ್ಮಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!