ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಪ್ರಭಾಸ್, ಅಮಿತಾಬ್ ಬಚ್ಚನ್ ಹಾಗೂ ದೀಪಿಕಾ ಪಡುಕೋಣ್ ಅಭಿನಯದ ಕಲ್ಕಿ 2898 ಎಡಿ ಸಿನಿಮಾ ಯಶಸ್ವೀ ಪ್ರದರ್ಶನ ಕಾಣುತ್ತಿದೆ.
ಅಭಿಮಾನಿಗಳಿಂದ ಪ್ರಭಾಸ್ ಹೊಸ ಅವತಾರಕ್ಕೆ ಮೆಚ್ಚುಗೆಯ ಮಹಾಪೂರವೇ ಸಿಕ್ಕಿದೆ, ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಪ್ರಭಾಸ್ ಅಭಿಮಾನಿಗಳು ವಿಶ್ವದೆಲ್ಲೆಡೆ ಇದ್ದು, ಸದ್ಯ ಜಪಾನ್‌ನ ಫ್ಯಾನ್ಸ್ ಇಂಡಿಯಾಗೆ ಬಂದಿಳಿದಿದ್ದಾರೆ.
ಪ್ರಭಾಸ್ ಅವರ ಕಟ್ಟಾ ಅಭಿಮಾನಿಗಳ ತಂಡವೊಂದು ಇತ್ತೀಚೆಗೆ ಅವರ ‘ಕಲ್ಕಿ 2898 ಎಡಿ’ ಸಿನಿಮಾ ವೀಕ್ಷಿಸಲು ಜಪಾನ್‌ನಿಂದಹೈದರಾಬಾದ್‌ಗೆ ಆಗಮಿಸಿತ್ತು. ಭಾರತದ ಸೆಲೆಬ್ರಿಟಿಗಳಿಗೂ ವಿಶ್ವದಾದ್ಯಂತ ಫ್ಯಾನ್ಸ್ ಇದ್ದಾರೆ ಅನ್ನೋದಕ್ಕೆ ಇದೇ ಸಾಕ್ಷಿಯಾಗಿದೆ.