ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕನ್ನಡದ ಜೀ ವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್‌ನಲ್ಲಿ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ಅವರ ಭೇಟಿ ನೀಡಿ ತಮ್ಮ ಜೀವನದ ಖುಷಿ ಕಹಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ನಟ ರಮೇಶ್ ಅರವಿಂದ್ ಜೊತೆ ಬದುಕಿನ ಬಾಲ್ಯದ ಹಲವಾರು ವಿಚಾರಗಳನ್ನ ಪ್ರಭುದೇವ ಹಂಚಿಕೊಂಡಿದ್ದಾರೆ. ಅದಷ್ಟೇ ಅಲ್ಲ, ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರು ಪ್ರ ಬಗ್ಗೆ Weekend With Ramesh ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
ಮೈಸೂರು ಮೂಲದ ನಟ ಪ್ರಭುದೇವ ಅವರಿಗೆ ಬಾಲಿವುಡ್‌ನಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇದೆ. ನಟ, ನಿರ್ದೇಶಕ, ಕೊರಿಯೋಗ್ರಾಫರ್ ಆಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.
ಪ್ರಭುದೇವ-ಅವರ ತಂದೆ ಮುಗೂರ್ ಸುಂದರ್ ಇಡೀ ಕುಟುಂಬ ಚಿತ್ರರಂಗದಲ್ಲಿ ಕಲಾಸೇವೆ ಮಾಡುತ್ತಲೇ ಬಂದಿದ್ದಾರೆ. ಪ್ರಭುದೇವ ಅವರು `ಪದ್ಮಶ್ರೀ’ ಜೊತೆಗೆ 2 ರಾಷ್ಟ್ರ ಪ್ರಶಸ್ತಿ ಪುರಸ್ಕಾರ ಪಡೆದಿದ್ದಾರೆ .
36 ವರ್ಷಗಳಲ್ಲಿ 100ಕ್ಕೂ ಅಧಿಕ ಸಿನಿಮಾಗಳಿಗೆ ಕೊರಿಯೋಗ್ರಫಿ ಮಾಡಿರುವ ಪ್ರಭುದೇವ ಅವರು 61 ಚಿತ್ರಗಳಲ್ಲಿ ನಟಿಸಿದ್ದಾರೆ, 15 ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ, 3 ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ. ಇಷ್ಟೇಲ್ಲಾ ಸಾಧನೆ ಮಾಡಿರುವ ಪ್ರಭುದೇವ ಅವರು ಕಷ್ಟದಲ್ಲಿರುವ ಸ್ನೇಹಿತರಿಗಾಗಿ ಮಿಡಿಯುವ ಮನಸ್ಸಿನ ಬಗ್ಗೆ ಪ್ರಕಾಶ್ ರಾಜ್ ವೀಕೆಂಡ್ ವಿತ್ ರಮೇಶ್‌ನಲ್ಲಿ ಹಂಚಿಕೊಂಡಿದ್ದಾರೆ.
ಬಹುಭಾಷಾ ನಟ ಪ್ರಕಾಶ್ ರಾಜ್ ಕಾರ್ಯಕ್ರಮದಲ್ಲಿ ವೀಡಿಯೋ ಸಂದೇಶದ ಮೂಲಕ ಸ್ನೇಹಿತ ಪ್ರಭುದೇವ ಅವರ ಹುಟ್ಟುಹಬ್ಬಕ್ಕೆ, ಸಿನಿ ಜರ್ನಿಗೆ ಶುಭಹಾರೈಸಿದ್ದಾರೆ. ಹಾಗೆಯೇ ಎಲ್ಲೂ ಹೇಳಿರದ ವಿಚಾರವೊಂದರನ್ನ ಹಂಚಿಕೊಂಡಿದ್ದಾರೆ. ಪ್ರಕಾಶ್ ರಾಜ್ ಅವರಿಗೆ `ಸಿದ್ದು’ ಎಂಬ ಮುದ್ದಾದ ಗಂಡು ಮಗನಿದ್ದ, 2004ರಲ್ಲಿ 5 ವರ್ಷದ ಮಗ ಸಿದ್ದು ನಿಧನರಾದರು. ಮಗನ ನಿಧನದ ಸಂದರ್ಭದಲ್ಲಿ ಧೈರ್ಯ,ಸಾಂತ್ವನ ತುಂಬಿದ ಬಗ್ಗೆ ಪ್ರಕಾಶ್ ರಾಜ್ ಹೇಳಿದ್ದಾರೆ. ಸಂಕಷ್ಟದ ಸಮಯದಲ್ಲಿ ಪ್ರಭುದೇವ ಸಾಥ್ ನೀಡಿದ್ದರ ಬಗ್ಗೆ ನಟ ಹಂಚಿಕೊಂಡಿದ್ದಾರೆ.
ಈ ಕಾರ್ಯಕ್ರಮ ಶಾಲೆಯ ಗೆಳೆಯರು ಸೇರಿದಂತೆ ಬಾಲ್ಯದ ಗೆಳೆಯರೆಲ್ಲರೂ ಸಹ ವೇದಿಕೆಯ ಮೇಲೆ ಬಂದು ಪ್ರಭುದೇವ ಅವರಿಗೆ ಸರ್ಪ್ರೈಸ್ ನೀಡುವ ಮೂಲಕ ಮತ್ತೊಮ್ಮೆ ಶಾಲಾ ದಿನಗಳು ಹಾಗೂ ಬಾಲ್ಯಕ್ಕೆ ಕರೆದುಕೊಂಡು ಹೋಗುವ ಕೆಲಸವನ್ನು ಮಾಡಿದ್ದಾರೆ.