ಕರ್ನಾಟಕ ಅಡ್ವೋಕೇಟ್ ಜನರಲ್ ಹುದ್ದೆಗೆ ಪ್ರಭುಲಿಂಗ ನಾವದಗಿ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಇಂದು ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ.

ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ಭಾನುವಾರ ರಾಜೀನಾಮೆ ನೀಡಿದರು.

2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು.

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಪಕ್ಷವು 137 ಸ್ಥಾನ ಗಳಿಸಿ ಭರ್ಜರಿ ಬಹುಮತ ಪಡೆದಿದೆ. ಬಿಜೆಪಿ 65 ಹಾಗೂ ಜೆಡಿಎಸ್ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿವೆ. ಇತರರು ಮೂರು ಕಡೆ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!