ಪ್ರದೀಪ್‌ ಈಶ್ವರ್‌ ಸೂಪರ್‌ 60 ಸಕ್ಸಸ್‌, ಬಹುತೇಕ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಾಸಕ ಪ್ರದೀಪ್ ಈಶ್ವರ್  ತಮ್ಮ ಸ್ವಂತ ಖರ್ಚಿನಲ್ಲಿ ಶುರು ಮಾಡಿದ ಸೂಪರ್‌ 60 ಶೈಕ್ಷಣಿಕ ಕಾರ್ಯಕ್ರಮ ಕೂಡ ಯಶಸ್ವಿಯಾಗಿದ್ದು, ಒಟ್ಟಾರೆ 60 ವಿದ್ಯಾರ್ಥಿಗಳಲ್ಲಿ ಬಹುತೇಕರು ಡಿಸ್ಟಿಂಕ್ಷನ್‌ನಲ್ಲಿ ಪಾಸ್‌ ಆಗಿದ್ದಾರೆ.

ಆರಂಭವಾದ ಮೊದಲ ವರ್ಷದಲ್ಲೇ ಸೂಪರ್‌ 60ಗೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸೂಪರ್‌ 30ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಾಗಿತ್ತು. ಇದೀಗ ಸೂಪರ್ 60ಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಅದರಲ್ಲೂ ಬಹುತೇಕ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ಪಾಸ್ ಆಗಿದ್ದಾರೆ. ಸರ್ಕಾರಿ ಶಾಲೆ ಮತ್ತು ಸರ್ಕಾರಿ ಏಡೆಡ್ ಶಾಲೆಗಳಿಂದ ಒಟ್ಟು 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸೂಪರ್ 60ನಲ್ಲಿ ತರಬೇತಿ ನೀಡಲಾಗಿತ್ತು. ಅದರಲ್ಲಿ ಹೆಚ್ಚಾಗಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ರೈನಿಂಗ್ ಸಹ ನೀಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!