ಕೊಲ್ಲೂರಿನಲ್ಲಿ ಸಲಾಂ ಮಂಗಳರಾತಿ ಬದಲು ಪ್ರದೋಷ ಮಂಗಳಾರತಿ; ವಿಹಿಂಪ ಸ್ವಾಗತ

ಹೊಸದಿಗಂತ ವರದಿ, ಮಂಗಳೂರು
ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿದ್ದ ಸಲಾಂ ಮಹಾಮಂಗಳಾರತಿಯ ಹೆಸರು ರದ್ದುಗೊಳಿಸಿರುವ ದೇವಸ್ಥಾನ ಆಡಳಿತ ಮಂಡಳಿಯ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರ. ಭಾರತದ 108 ಶಕ್ತಿ ಪೀಠಗಳಲ್ಲಿ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರವೂ ಒಂದು. ಇಂತಹ ಪವಿತ್ರ ಕ್ಷೇತ್ರದಲ್ಲಿ ಒಬ್ಬ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ಕನ್ನಡ ವಿರೋಧಿ ಸಾವಿರಾರು ಹಿಂದುಗಳನ್ನು ಹತ್ಯೆ ಮಾಡಿ, ನೂರಾರು ದೇವಸ್ಥಾನಗಳನ್ನು ದ್ವಂಸಗೊಳಿಸಿದಂತಹ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ರಾತ್ರಿ 8 ಗಂಟೆಗೆ ದೇವಿ ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿ ನಡೆಯುತ್ತಿದ್ದು ಅದನ್ನು ವಿರೋಧಿಸಿ ಮತ್ತು ಹೆಸರು ಬದಲಾಯಿಸುವಂತೆ ದೇವಸ್ಥಾನ ಮಂಡಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿತ್ತು.
ಮನವಿಗೆ ಸ್ಪಂದಿಸಿ ದೇವಸ್ಥಾನ ಆಡಳಿತ ಮಂಡಳಿ ಸಲಾಂ ಹೆಸರನ್ನು ತೆಗೆದುಹಾಕಿ ಪ್ರದೋಷ ಮಂಗಳಾರತಿ ಎಂದು ಬದಲಾಯಿಸಿದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!