Monday, October 2, 2023

Latest Posts

ಪ್ರಫುಲ್ ಪಟೇಲ್, ಸುಪ್ರಿಯಾ ಸುಳೆ ಎನ್‌ಸಿಪಿಯ ಕಾರ್ಯಾಧ್ಯಕ್ಷರು: ಶರದ್ ಪವಾರ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರು ಸುಪ್ರಿಯಾ ಸುಳೆ (Supriya Sule) ಮತ್ತು ಪ್ರಫುಲ್ ಪಟೇಲ್ (Praful Patel) ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಘೋಷಿಸಿದ್ದಾರೆ.

1999 ರಲ್ಲಿ ಪವಾರ್ ಮತ್ತು ಪಿಎ ಸಂಗ್ಮಾ ಅವರು ಸ್ಥಾಪಿಸಿದ ಪಕ್ಷದ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎನ್‌ಸಿಪಿಯ ಪ್ರಮುಖ ನಾಯಕ ಅಜಿತ್ ಪವಾರ್ ಅವರ ಸಮ್ಮುಖದಲ್ಲಿ ಈ ಘೋಷಣೆ ಮಾಡಲಾಗಿದೆ.

ಶರದ್ ಪವಾರ್ ಕಳೆದ ತಿಂಗಳು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಪಕ್ಷದ ಸದಸ್ಯರು ಮತ್ತು ಇತರ ರಾಜಕೀಯ ಮುಖಂಡರ ಒತ್ತಾಯಕ್ಕೆ ಮಣಿದು ರಾಜೀನಾಮೆ ವಾಪಸ್ ತೆಗೆದುಕೊಂಡಿದ್ದರು.

ಸೆಪ್ಟೆಂಬರ್ 2006 ರಲ್ಲಿ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗುವ ಮೂಲಕ ಸುಳೆ ಅವರನ್ನು ಸಕ್ರಿಯ ರಾಜಕೀಯಕ್ಕೆ ಪರಿಚಯಿಸಲಾಯಿತು. ನಂತರ 2009 ರಲ್ಲಿ, ಅವರು ಅಲ್ಲಿಯವರೆಗೆ ಪವಾರ್ ಪ್ರತಿನಿಧಿಸುತ್ತಿದ್ದ ಬಾರಾಮತಿ ಲೋಕಸಭಾ ಕ್ಷೇತ್ರವನ್ನು ವಹಿಸಿಕೊಂಡರು. ಯುವತಿಯರೊಂದಿಗೆ ಸಂಪರ್ಕ ಸಾಧಿಸಲು ಮತ್ತು ರಾಜ್ಯಾದ್ಯಂತ ನೆಟ್‌ವರ್ಕ್ ನಿರ್ಮಿಸಲು ಯುವತಿಯರ ವಿಭಾಗವಾದ ರಾಷ್ಟ್ರವಾದಿ ಯುವತಿ ಕಾಂಗ್ರೆಸ್ ಅನ್ನು ಸಹ ಅವರು ರಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!