ಹೊಸದಿಗಂತ ವರದಿ ಹುಬ್ಬಳ್ಳಿ :
ಕಾಂಗ್ರೆಸ್ ಸುಡುವ ಮನೆಯಾಗಿದೆ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಾತನನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೆನಪಿಸಿದರು.
ನಗರದ ನೆಹರೂ ಮೈದಾನದಲ್ಲಿ ರಾಜ್ಯ ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿ ಹಾಗೂ ಒಳ ಮೀಸಲಾತಿ ನೀಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ದೇಶದಲ್ಲಿ ದಲಿತರಿಗೆ ಹಾಗೂ ದಲಿತ ಮುಖಂಡರಿಗೆ ಸತತ ಅನ್ಯಾಯ ಮಾಡುವ ಕಾರ್ಯ ಕಾಂಗ್ರೆಸ್ ಮಾಡಿದೆ. ಬಿ.ಆರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದರು. ನೆಹರೂ ಅವರು ಅಂಬೇಡ್ಕರ್ ಸೋಲಿಸಲು ತಮ್ಮ ಮನೆಯ ನೌಕರರನ್ನು ಚುನಾವಣೆಗೆ ನಿಲ್ಲಿಸಿ ಅವರ ಪರ ಪ್ರಚಾರ ಮಾಡಿದ್ದರು ಎಂದರು.
ಖರ್ಗೆ ಅವರಿಗೆ ಮುನಿಯಪ್ಪ ಹಾಗೂ ಜಿ. ಪರಮೇಶ್ವರ ಅವರು ರಾಜಕೀಯವಾಗಿ ಅನ್ಯಾಯ ಮಾಡಿದ್ದಾರೆ. ಬಿ.ಆರ್. ಅಂಬೇಡ್ಕರ್‌ಗೆ ಭಾರತ ರತ್ನ ನೀಡಲಿಲ್ಲ. ಜಗಜೀವ ರಾಮ್ ಅವರಿಗೆ ಪ್ರಧಾನಿ ಮಾಡಲು ಬಿಟ್ಟಿಲ್ಲ ಎಂದು ಆರೋಪಿಸಿದರು.