ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ಇಂದು ಚುನಾವಣಾ ಪ್ರಚಾರ ಸಭೆ ನಡೆಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಾಧ್ಯಮ ಪ್ರತಿನಿಧಿಗಳು ಪ್ರಜ್ವಲ್ ರೇವಣ್ಣ ಬಗ್ಗೆ ಪ್ರಶ್ನೆ ಕೇಳಿದಾಗ ಆ ಪ್ರಕರಣ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಉತ್ತರಿಸಿದ್ದಾರೆ.
ಇದು ಕೌಟುಂಬಿಕ ವಿಚಾರವಾಗಿದ್ದು, ನಮ್ಮ ಪಕ್ಷಕ್ಕೂ ಘಟನೆಗೂ ಯಾವುದೇ ಸಂಬಂಧವಿಲ್ಲ, ಆದರೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಭಾರತೀಯ ಜನತಾ ಪಕ್ಷವು ಈ ಬಗ್ಗೆ ಕೇಳಬೇಕಿದೆ ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಮತ್ತು ಎನ್ ಡಿಎ ನಿಲುವೇನು ಎಂದು ಅವರನ್ನು ಕೇಳಬೇಕು ಎಂದರು.
ಆದಾಗ್ಯೂ, ಲೈಂಗಿಕ ಶೋಷಣೆ ಮತ್ತು ಅತ್ಯಾಚಾರದ ಆರೋಪದ ಮೇಲೆ ದೇಶದಿಂದ ಪಲಾಯನ ಮಾಡಿದ ಪ್ರಜ್ವಲ್ ರೇವಣ್ಣ ಬಗ್ಗೆ ರಾಜ್ಯದೆಲ್ಲೆಡೆ ಮಹಿಳಾ ಸಂಘನೆಗಳಿಂದ ಉಗ್ರ ಪ್ರತಿಭಟನೆಗಳು ನಡೆಯುತ್ತಿವೆ.