ʼಪ್ರಜ್ವಲ್‌ ದೇವರಾಜ್‌ ನಿಧನʼ ಸಾಮಾಜಿಕ ಜಾಲತಾಣದ ಫೇಕ್‌ ಪೋಸ್ಟ್‌ಗೆ ಫ್ಯಾಮಿಲಿ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕನ್ನಡದ ನಟ ದೇವರಾಜ್‌ ಪುತ್ರ ಪ್ರಜ್ವಲ್‌ ದೇವರಾಜ್‌ ಇನ್ನಿಲ್ಲ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ನಟನ ಫೋಟೋವನ್ನು ದುರ್ಬಳಕೆ ಮಾಡಿಕೊಂಡು ಫೇಕ್​ ನ್ಯೂಸ್  ಹರಡಲಾಗಿದೆ. ‘ಪ್ರಜ್ವಲ್​ ದೇವರಾಜ್​ ಇನ್ನಿಲ್ಲ. ಓಂ ಶಾಂತಿ’ ಎಂಬ ಕ್ಯಾಪ್ಷನ್​ನೊಂದಿಗೆ ಪ್ರಜ್ವಲ್​ ದೇವರಾಜ್​ ಅವರ ಫೋಟೋವನ್ನು ವೈರಲ್​ ಮಾಡಲಾಗಿದೆ.

ಸುಳ್ಳು ಸುದ್ದಿಯ ಬಗ್ಗೆ ಪ್ರಜ್ವಲ್​ ದೇವರಾಜ್​ ಕುಟುಂಬದವರು ಗರಂ ಆಗಿದ್ದು, ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಆಲೋಚಿಸಿದ್ದಾರೆ. ಪ್ರಜ್ವಲ್ ದೇವರಾಜ್ ಕ್ಷೇಮವಾಗಿ ಇದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಪ್ರಜ್ವಲ್ ಅವರ ಪೋಟೋಗಳನ್ನು ದುರ್ಬಳಕೆ ಮಾಡಲಾಗಿದೆ. ಚೆನ್ನಾಗಿರುವ ನಟನ ಬಗ್ಗೆ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಬಾರದು ಎಂದು ಕುಟುಂಬದವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!