ಪ್ರಜ್ವಲ್, ಹೆಚ್.ಡಿ. ರೇವಣ್ಣ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ ಜೆಡಿಎಸ್ ನಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ಜೆಡಿಎಸ್ ನಿಯೋಗ ದೂರು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಯಕರ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡಿದೆ.

ಪೆನ್ ಡ್ರೈವ್ ಪ್ರಕರಣ ಹಾಗೂ ರೇವಣ್ಣ ವಿರುದ್ಧ ಕಿಡ್ನ್ಯಾಪ್ ಆರೋಪ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು ಹಾಗೂ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!