ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವರ್ ರೇವಣ್ಣ ತಲೆಮರೆಸಿಕೊಂಡಿದ್ದು, ಎಸ್‌ಐಟಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ.
ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್ ನಿಂದ ಇಂದು ಬರುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಜೊತೆಗೆ ಟಿಕೆಟ್ ಬುಕ್ ಆಗಿರೋ ಮಾಹಿತಿ ಸಿಕ್ಕಿತ್ತು. ಆದ್ರೆ ಫ್ಲೈಟ್ ಟೇಕ್ ಆಫ್ ಆಗಿದ್ದರೂ ಅವರು ಅವರು ಅತ್ತ ಸುಳಿದಿಲ್ಲ. ಹೀಗಾಗಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್ ಮಾಡಿಸಿಯೂ ಅವರು ವಿಮಾನವನ್ನು ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ.
ಎರಡು ದಿನಗಳಿಂದೆ ಬೆಂಗಳೂರಿಗೆ ಬರಲು ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿದ್ದರು. ಆದರೆ ಕೊನೆಕ್ಷಣದಲ್ಲಿ ಕ್ಯಾನ್ಸಲ್ ಮಾಡಿದ್ದ, ಇಂದು ಮತ್ತೆ ಬುಕ್ ಮಾಡಿದ್ದರು. ಆ ವಿಮಾನ ಜರ್ಮನ್ ಕಾಲಮಾನದ ಪ್ರಕಾರ 12:20 ಅಂದರೆ ಭಾರತೀಯ ಕಾಲಮಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಹಾರಲಿರುವ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಆದರೆ ವಿಮಾನ್ ಟೇಕ್ ಆಗಿದ್ದು, ಇಂದೂ ಕೂಡ ರೇವಣ್ಣ ವಿಮಾನ ಏರಿಲ್ಲ, ಪ್ರಯಾಣಿಕರ ಲಿಸ್ಟ್ನಲ್ಲಿ ಪ್ರಜ್ವಲ್ ಹೆಸರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲ ಪ್ರಯಾಣಿಕರಿಗೆ ಫ್ಲೈಟ್ ಹತ್ತಲು ಬೋರ್ಡಿಂಗ್ ಕ್ಲೋಸ್ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್ ಆಫ್ ಆಗಿದೆ. ಇದರ ಬ್ಯುಸಿನೆಸ್ ಕ್ಲಾಸ್ ಫ್ಲೈಟ್ ಟಿಕೆಟ್‌ಗೆ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಇಷ್ಟಾದರೂ ಪ್ರಜ್ವಲ್ ಅಲ್ಲಿಂದ ಹೊರಟೇ ಇಲ್ಲ ಎಂದು ತಿಳಿದುಬಂದಿದೆ.
ಹೀಗಾಗಿ ಇಂದು ಕೂಡ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುತ್ತಿಲ್ಲ. ಅವರು ಎಸ್‌ಐಟಿ ಅಧಿಕಾರಿಗಳ ಜೊತೆಗೆ ಕಣ್ಣಾಮುಚ್ಚಾಲೆ ಆಟ ಆಡ್ತಿದ್ದಾರೆ. ಇಂದು, ನಾಳೆ ಬೆಂಗಳೂರಿಗೆ ಬರ್ತಾರೆ ಬರ್ತಾ ಅಂತ ಕಾಯೋ ಪರಿಸ್ಥಿತಿ ತಂದಿಟ್ಟಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.