ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರಜ್ವಲ್‌ ವೈದ್ಯಕೀಯ ಪರೀಕ್ಷೆ, ಇತರೆ ರೋಗಿಗಳಿಗೆ ಕಿರಿಕಿರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆಸ್ಪತ್ರೆಗೆ ಬಂದಿದ್ದ ಇತರೆ ರೋಗಿಗಳು ಪರದಾಡುವಂತಾಗಿದೆ.

ಎಸ್‌ಐಟಿ ಅಧಿಕಾರಿಗಳು ನಿನ್ನೆ ತಡರಾತ್ರಿ ಪ್ರಜ್ವಲ್ ರೇವಣ್ಣರನ್ನು ಬಂಧಿಸಿದರು. ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಅದಕ್ಕೂ ಮೊದಲು ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತುರ್ತು ನಿಗಾ ಘಟಕದ ಕಟ್ಟಡದಲ್ಲಿ ಬಿಪಿ, ಶುಗರ್, ಪಲ್ಸ್, ಹಾರ್ಟ್ ರೇಟ್, ಯೂರಿನ್, ರಕ್ತ ಪರೀಕ್ಷೆ ನಡೆಸಲಾಯಿತು.

ಪ್ರಜ್ವಲ್ ವೈದ್ಯಕೀಯ ಪರೀಕ್ಷೆ ವೇಳೆ, ಬೌರಿಂಗ್ ಆಸ್ಪತ್ರೆ ಬಳಿ ಪೊಲೀಸರ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಕೆಎಸ್‌ಆರ್‌ಪಿಯ ಒಂದು ತುಕಡಿ ನಿಯೋಜನೆ ಮಾಡಲಾಗಿತ್ತು. ತುರ್ತು ನಿಗಾ ಘಟಕದ ಮುಂಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಇದರಿಂದಾಗಿ ಇತರೆ ರೋಗಿಗಳು ಪರದಾಡುವಂತಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!