ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ವಿಶೇಷ ಅಭಿಯೋಜಕರನ್ನು ನೇಮಿಸಿದ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಪ್ರಕರಣಕ್ಕೆ (Prajwal Revanna Pendrive Case) ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಿಸಿದೆ.

ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ(ಎಸ್​ಪಿಪಿ) ಎನ್.ಜಗದೀಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎನ್.ಜಗದೀಶ್ ಅವರು ಸದ್ಯ ಹಾಲಿ ಹೆಚ್ಚುವರಿ ರಾಜ್ಯ ಅಭಿಯೋಜಕರಾಗಿದ್ದಾರೆ. ಇದೀಗ ಇವರನ್ನೇ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ರೇವಣ್ಣ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!