ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಈಗಾಗಲೇ ಅವರು ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆ ಬಾರದ ಕಾರಣ ಮತ್ತೆ ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಪಡಿಸುವಂತೆ ಮೋದಿಗೆ ಸಿಎಂ ಪತ್ರ ಬರೆದು ಮನವಿ ಮಾಡಿದ್ದಾರೆ.
ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರವನ್ನು ಹೊಣೆ ಮಾಡಿದ ರಾಜ್ಯ ಸರ್ಕಾರ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಒತ್ತಾಯಿಸಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿದರೆ ಪ್ರಜ್ವಲ್ ವಾಪಸ್ ಬರಲೇಬೇಕಾಗುತ್ತದೆ. ಹೀಗಾಗಿ ಆ ಕ್ರಮ ಕೈಗೊಳ್ಳಬೇಕು. ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.