ಹೊಸದಿಗಂತ ಡಿಜಿಟಲ್ ಡೆಸ್ಕ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬoಧಿಸಿದoತೆ ಸಂತ್ರಸ್ತ ಮಹಿಳೆಯ ಅಪಹರಣ ಕೇಸ್ ನಲ್ಲಿ ೨ನೇ ಆರೋಪಿಯಾಗಿರುವ ಸತೀಶ್ ಬಾಬು ಎಂಬಾತನನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನನ್ನ ತಾಯಿಯನ್ನ ಅಪಹರಿಸಲಾಗಿದೆ ಎಂದು ಆರೋಪಿಸಿ ಶಾಸಕ ಹೆಚ್ ಡಿ ರೇವಣ್ಣ ಮತ್ತು ಸುರೇಶ್ ಬಾಬು ಎಂಬುವವರ ವಿರುದ್ದ ಸಂತ್ರಸ್ತ ಮಹಿಳೆಯ ಪುತ್ರ ಕೆಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬ ಎಫ್ ಐಆರ್ ದಾಖಲಾಗಿತ್ತು.
ಎರಡನೇ ಆರೋಪಿ ಸತೀಶ್ ಬಾಬುರನ್ನು ಕೆ.ಆರ್.ನಗರ ಪೊಲೀಸರು ಬಂಧಿಸಿ, ಕೆ.ಆರ್.ನಗರ ನ್ಯಾಯಾಲಯಕ್ಕೆ ಹಾಜರುಪಡಿಲಾಗಿದ್ದು ನ್ಯಾಯಾಧೀಶರು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.