ಪ್ರಜ್ವಲ್ ರೇವಣ್ಣ ಕೇಸ್: ವಕೀಲ ದೇವರಾಜೇಗೌಡ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಇದೀಗ ದೂರು ದಾಖಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ದೇವರಾಜೇಗೌಡ ಬ್ಲ್ಯಾಕ್​ಮೇಲರ್ ಎಂದು ಈಗಾಗಲೇ ಕುಖ್ಯಾತಿಯಾಗಿದ್ದಾರೆ. ಏ.1ರಂದು ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು, ಬಹಿರಂಗ ಪೆನ್​ಡ್ರೈವ್ ಕೇಸ್ ಇಟ್ಟುಕೊಂಡು ಸರ್ಕಾರದ ವಿರುದ್ಧ ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಆರೋಪಿಸುತ್ತಿದ್ದ ಈತನ ಹೀನ ಕೃತ್ಯ ಬಹಿರಂಗವಾಗಿದ್ದು, ತಕ್ಷಣ ಕಾನೂನು ಕ್ರಮಕೈಗೊಂಡು ಬಂಧಿಸಬೇಕು. ದೇವರಾಜೇಗೌಡ ನೈಜ ಚಿತ್ರಣ, ಹಿನ್ನೆಲೆ ಬಹಿರಂಗ ಪಡಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ , ಮಹಿಳೆಯರಿಗೆ ನ್ಯಾಯ ಕೊಡಿಸುತ್ತೇನೆಂದು ಅವರೇ ದೌರ್ಜನ್ಯವೆಸಗಿದ್ದಾರೆ. ಕಾನೂನಾತ್ಮಕವಾಗಿ ಹೋರಾಟ ಮಾಡುವವರೇ ದೌರ್ಜನ್ಯವೆಸಗಿದ್ದಾರೆ. ಎಸ್ಐಟಿ ಸರಿಯಾಗಿ ನಡೆಸುತ್ತಿಲ್ಲವೆಂದು ದೇವರಾಜೇಗೌಡ ಹೇಳುತ್ತಿದ್ದಾರೆ/ ಸಂತ್ರಸ್ತೆ ದೂರು ನೀಡಿದ ನಂತರ ನಾಪತ್ತೆಯಾಗಿದ್ದಾರೆಂದು ಆರೋಪಿಸಿದ್ದಾರೆ. ಹೀಗಾಗಿ ದೇವರಾಜೇಗೌಡ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರು ದಾಖಲಿಸಿರುವುದಾಗಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!