ಪ್ರಜ್ವಲ್‌ ರೇವಣ್ಣ ಪ್ರಕರಣ | ಅಪರಾಧ ಮಾಡುವವರಿಗೆ ಕಠಿಣ ಶಿಕ್ಷೆ ನೀಡಬೇಕು: ಅಮಿತ್​ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಕೇಂದ್ರ ಗೃಹಸಚಿವ ಅಮಿತ್​ ಶಾ (Amit Shah) ಮಾತನಾಡಿದ್ದು, ಮಹಿಳೆಯರ ಮೇಲೆ ದೌರ್ಜನ್ಯವೆಸಗಿದವರ ನಾವು ಇರುವುದಿಲ್ಲ. ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆ ನೀಡಿ, ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿ ನಗರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಪ್ರಜ್ವಲ್ ರೇವಣ್ಣನ ಪೆನ್​ಡ್ರೈವ್ ಬಂತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಯಾಕೆ ಕ್ರಮಕೈಗೊಳ್ಳಲಿಲ್ಲ. ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಹಾರಿಹೋಗಲು ಏಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದು, ಇಂತಹ ಪ್ರಕರಣದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಲು ನಿಮಗೆ ಆಗದಿದ್ದಲ್ಲಿ ಹೇಳಿ ಕರ್ನಾಟಕವನ್ನು ನಾವು ಸುರಕ್ಷಿತವಾಗಿ ಇಡುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನೇಹಾ ಹಿರೇಮಠ ಕೊಲೆ ಪ್ರಕರಣ ಪ್ರಸ್ತಾಪಿಸಿದ ಅಮಿತ್ ಶಾ, ಏ.18ರಂದು ನೇಹಾಗೆ ಚಾಕುವಿನಿಂದ ಇರಿದು ಕೊಂದಿದ್ದ ಫಯಾಜ್. ನೇಹಾ ಹಿರೇಮಠ ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!