ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳಿಂದಾಗಿ ಕೇವಲ ಅವರು ಮಾತ್ರವಲ್ಲ, ಇಡೀ ರಾಜ್ಯವೇ ತಲೆತಗ್ಗಿಸುವಂಥಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅವರ ವಿರುದ್ಧ ಕೇಳಿಬಂದಿರುವ ಹಗರಣ ಆರೋಪಗಳು ಪ್ರಜ್ವಲ್ ಅವರಿಗೆ ಮಾತ್ರ ಸಂಬಂಧಿಸಿದ್ದು. ಅದಕ್ಕೂ ನಮ್ಮ ಇಡೀ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಖಡಾಖಂಡಿತವಾಗಿ ಹೇಳಿದರು. ಇಷ್ಟೆಲ್ಲಾ ಆರೋಪಗಳ ಹೊರತಾಗಿಯೂ ಪ್ರಜ್ವಲ್ ರೇವಣ್ಣ ಅವರ ಒಳ್ಳೆಯ ಲೀಡ್ ನಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.