ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನವಾಗಿದ್ದು, ಇದೀಗ ಅವರನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಹೊಳೆನರಸೀಪುರದ ಜೆಎಂಎಎಫ್‌ಸಿ ಕೋರ್ಟ್ ಆದೇಶ ಹೊರಡಿಸಿದೆ.
ಮತ್ತೊಂದೆಡೆ ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ಬಂಧನವಾಗಿರುವ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ದೇವರಾಜೇಗೌಡ ಅವರನ್ನು ಬುಧವಾರ ಬೆಳಗ್ಗೆ 9 ಗಂಟೆಯಿಂದ ಮೇ 16 ರ ರಾತ್ರಿ ವರೆಗೆ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡಲು ಹೊಳೆನರಸೀಪುರ ನಗರ ಠಾಣೆ ಪೊಲೀಸರು ಮನವಿ ಮಾಡಿದ್ದರು. ಹೀಗಾಗಿ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮೇ 11 ರಂದು ದೇವರಾಜೇಗೌಡ ಬಂಧನವಾಗಿತ್ತು. ನಾಳ ಬೆಳಗ್ಗೆ 9 ಗಂಟೆಗೆ ಹಾಸನದ ಜಿಲ್ಲಾ ಕಾರಾಗೃಹದಿಂದ ದೇವರಾಜೇಗೌಡ ಅವರನ್ನು ಪೊಲೀಸರು ಕರೆದೊಯ್ಯಲಿದ್ದಾರೆ.