ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ(Pen drive Case) ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಾಸನದ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್(JMFC Court) ಆದೇಶಿಸಿದೆ.
ಆರೋಪಿಗಳ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.