ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಘೋಷಣೆ ಮಾಡಿದ್ದಾರೆ.
ಹೊಳೆನರಸೀಪುರದಲ್ಲಿ ರ ನಡೆದ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ದೇವೇಗೌಡ, ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಕಾಂಗ್ರೆಸ್ ವಿರುದ್ಧ ಒಟ್ಟಾಗಿ ಹೋರಾಟ ನಡೆಸಲಿದೆ ಎಂದರು.
ನಾವು ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ. ಅದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ. ಕಳೆದ ಬಾರಿ ಕಾಂಗ್ರೆಸ್ ಐದು ಕಡೆ ಗೆದ್ದಿತ್ತು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಿತು. ವಿಧಾನಸಭಾ ಚುನಾವಣೆ ಫಲಿತಾಂಶ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನನ್ನ ರಾಜಕೀಯ ಅನುಭವದಲ್ಲಿ ಹೇಳುತ್ತಿದ್ದೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಕೊನೆ ಕ್ಷಣದಲ್ಲಿ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಅಧಿಕಾರ ಹಿಡಿಯಿತು. ಈಗ ದೇಶದಲ್ಲಿ ಎಲ್ಲಾ ಕಡೆ ಗ್ಯಾರೆಂಟಿ ಶುರುವಾಗಿದೆ. ಗ್ಯಾರೆಂಟಿ ಬಗ್ಗೆ ಈಗ ಹೆಚ್ಚು ಮಾತನಾಡೋದಿಲ್ಲ ಎಂದರು.