ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಎಸ್‌ಐಟಿ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ.
ಎರಡನೇ ದಿನ ವಿಚಾರಣೆ ಎದುರಿಸಿರುವ ಪ್ರಜ್ವಲ್ ರೇವಣ್ಣ ಅಧಿಕಾರಿಗಳ ಯಾವುದೇ ಪ್ರಶ್ನೆಗೂ ಸೂಕ್ತ ಉತ್ತರ ನೀಡದೇ ಅಸಹಕಾರ ತೋರಿದ್ದಾರೆ ಎನ್ನಲಾಗಿದೆ.
ಇದು ರಾಜಕೀಯ ಪಿತೂರಿ. ಸುಖಾಸುಮ್ಮನೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನಿಮ್ಮ ಕೆಲಸ ನೀವು ಮಾಡಿ. ನಾನೇನು ಹೇಳಲ್ಲ ಎಂದು ಮಾತ್ರ ಹೇಳಿದ್ದು, ಇನ್ಯಾವುದೇ ಉತ್ತರ ನೀಡೋಕೂ ಮುನ್ನ ನನ್ನ ಲಾಯರ್ ಭೇಟಿ ಮಾಡಬೇಕು ಎಂದು ಹೇಳಿದ್ದಾರೆ.
ತನಿಖಾಧಿಕಾರಿ ಎಷ್ಟೇ ಪ್ರಶ್ನೆ ಮಾಡಿದರೂ ನಮ್ಮ ಲಾಯರ್ ಕೇಳಬೇಕು. ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ. ನೀವು ಏನೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್ ಬಳಿ ಮಾತನಾಡಿ ಹೇಳುತ್ತೇನೆ. ಏನೇ ಉತ್ತರ ಕೊಡುವುದಿದ್ದರೂ ಲಾಯರ್ ಬಳಿ ಮಾತನಾಡಿ ಆ ನಂತರ ಉತ್ತರಿಸುತ್ತೇನೆ ಎಂದಿದ್ದಾರೆ.