ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್‌ನ ಪ್ರಜ್ವಲ್ ರೇವಣ್ಣರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈ ಕೋರ್ಟ್ ಆದೇಶ ನೀಡಿದೆ. ಎ. ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.
ಅಫಿಡವಿಟ್‌ನಲ್ಲಿ ಘೋಷಿಸಿದ ಆಸ್ತಿ ವಿವರ ಕುರಿತು ವಕೀಲ ದೇವರಾಜೇಗೌಡ ಆಕ್ಷೇಪ ವ್ಯಕ್ತಪಡಿಸಿ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇಂದು ವಿಚಾರಣೆ ನಡೆದಿದ್ದು, ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದೆ. ಐದು ವರ್ಷಗಳ ಹಿಂದೆ ಲೋಕಸಭಾ ಚುನಾವಣೆ ವೇಳೆ ನಾಮಪತ್ರ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ಇದೆ ಎಂದು ಅಭ್ಯರ್ಥಿ ಅರಕಲಗೂಡು ಮಂಜು ಅರ್ಜಿ ಸಲ್ಲಿಸಿದ್ದರು, ಅದನ್ನು ಹೈಕೋರ್ಟ್ ತಿರಸ್ಕರಿಸಿತ್ತು ಆದರೆ ಇದೀಗ ವಕೀಲ ದೇವರಾಜೇಗೌಡ ಸಲ್ಲಿಸಿದ ಅರ್ಜಿ ಆಧಾರದ ಮೇಲೆ ಆದೇಶ ನೀಡಲಾಗಿದೆ.