ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ 33 ದಿನಗಳ ಬಳಿಕ ಭಾರತಕ್ಕೆ ಬರುತ್ತಿದ್ದಾರೆ.
ಜರ್ಮನಿಯ ಮ್ಯೂನಿಕ್‌ನಿಂದ ಈಗಾಗಲೇ ಹೊರಟಿರುವ ಪ್ರಜ್ವಲ್ ಬೆಂಗಳೂರಿಗೆ ಆಗಮಿಸುತ್ತಿದ್ದು, ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಲು ಎಸ್‌ಐಟಿ ಅಧಿಕಾರಿಗಳು ಸಿದ್ಧರಾಗಿದ್ದಾರೆ.
ಇತ್ತ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬಸ್ಥರ ಜತೆ ಅವರು ಕಬಿನಿಯಲ್ಲಿ ಬೋಟಿಂಗ್ ಮಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.
ಪೆನ್‌ಡ್ರೈವ್ ತಲೆಬಿಸಿಯ ಮಧ್ಯೆಯೇ ಎಚ್.ಡಿ.ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ಹಾಗೂ ಮೊಮ್ಮಗ ಅವ್ಯಾನ್ ಜತೆಗೂಡಿ ಕಬಿನಿಯ ಜಂಗಲ್ ಲಾಡ್ಜ್‌ಗೆ ತೆರಳಿದ್ದಾರೆ.
ಇನ್ನು, ಗುರುವಾರ ರಾತ್ರಿ ಕಬಿನಿಯ ರೆಸಾರ್ಟ್‌ನಲ್ಲಿಯೇ ಕುಮಾರಸ್ವಾಮಿ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಗುರುವಾರ ತಡರಾತ್ರಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮಿಸುತ್ತಿದ್ದು, ಮುಜುಗರದಿಂದ ತಪ್ಪಿಸಿಕೊಳ್ಳಲು ಕುಮಾರಸ್ವಾಮಿ ಅವರು ರೆಸಾರ್ಟ್‌ಗೆ ತೆರಳಿದ್ದಾರೆ ಎನ್ನಲಾಗಿದೆ.