Sunday, October 12, 2025

ಜೀವಿತಾವಧಿ ಶಿಕ್ಷೆ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಇಂದು(ಅಕ್ಟೋಬರ್ 09) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದ್ಗಲ್ ಮತ್ತು ನ್ಯಾ.ವೆಂಕಟೇಶ್ ನಾಯ್ಕ್ ಟಿ ಅವರಿದ್ದ​ ಹೈಕೋರ್ಟ್ ವಿಭಾಗೀಯ ಪೀಠ‌, ಸಮಗ್ರ ಸಾರಾಂಶ ಸಲ್ಲಿಸಲು ಪ್ರಜ್ವಲ್ ಪರ ವಕೀಲರಿಗೆ ಸೂಚನೆ ನೀಡಿದೆ. ಜೊತೆಗೆ ಪ್ರಜ್ವಲ್ ಮೇಲ್ಮನವಿ ಬಗ್ಗೆ ಪ್ರತಿವಾದಿಯಾಗಿ ವಾದಿಸಲು ಎಸ್‌ಪಿಪಿ ನೇಮಕದ ಬಗ್ಗೆಯೂ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.

error: Content is protected !!