ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಇಂದಿಗೆ ಅಂತ್ಯ ಆಗಲಿದ್ದು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಎಸ್‌ಐಟಿ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಈವರೆಗೆ ಆರೋಪಿ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಅಧಿಕಾರಿಗಳು ಮುಗಿಸಿದ್ದಾರೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು.