ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪದಡಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದ ಜೈಲು ಸೇರಿದ್ದು, ಅವರಿಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ(UTP) ಸಂಖ್ಯೆ 5664 ನೀಡಲಾಗಿದೆ.
ಸದ್ಯ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ ಸೆಲ್ ನಲ್ಲಿದ್ದು, ಅವರಿಗೆ ವಿಚಾರಣಾಧೀನ ಕೈದಿ ನಂಬರ್-5664 ನೀಡಲಾಗಿದೆ. ಇನ್ನು ಇಂದಿನ ರಾತ್ರಿ ಊಟವನ್ನು ಸಹ ಜೈಲಾಧಿಕಾರಿಗಳು ನೀಡಿದ್ದಾರೆ. ರಾತ್ರಿ ಜೈಲಿನ ಮೆನುವಿನಂತೆ ಮುದ್ದೆ, ಅನ್ನ, ಸಾಂಬರು, ಪಲ್ಯ ನೀಡಲಾಗಿದೆ. ಆದ್ರೆ, ಪ್ರಜ್ವಲ್ ಜೈಲಿನ ಕ್ವಾರೆಂಟೈನ್ ಬ್ಯಾರಕ್ ನಲ್ಲಿ ಮೌನಕ್ಕೆ ಶರಣಾಗಿದ್ದಾರೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್. ಡಿ.ರೇವಣ್ಣಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿತ್ತು.
एनकाउंटर करना इस लोगको