ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಕಾಂಗ್ರೆಸ್ ಸಚಿವರ ಆಪ್ತನ ವಿರುದ್ಧ ಎಫ್ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಜ್ವಲ್ ರೇವಣ್ಣ ಅವರ ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ನಡುವೆ ಈ ವಿಡಿಯೋಗಳನ್ನು ವೈರಲ್ ಮಾಡಿದ ಸಚಿವ ಜಮೀರ್ ಅಹಮ್ಮದ್ ಆಪ್ತ ನವೀನ್ ಗೌಡ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದ ಅನ್ನೋ ಆರೋಪದಡಿ ದೂರು ದಾಖಲಾಗಿದೆ.

ನವೀನ್ ಗೌಡ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ, ಸಚಿವೆ ಜಮೀರ್ ಅಹಮ್ಮದ್ ಹಾಗೂ ನವೀನ್ ಗೌಡ ಜೊತೆಗಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಹಾಸನದ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ದ ದೂರು ದಾಖಲಾಗಿದೆ. ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಮಾಧ್ಯಮ, ವ್ಯಾಟ್ಸ್ಆ್ಯಪ್ ಮೂಲಕ ಹರಿದಾಡುತ್ತಿದ್ದಂತೆ ಏಪ್ರಿಲ್ 23ರಂದು ನವೀನ್ ಗೌಡ ವಿರುದ್ದ ಪ್ರಕರಣ ದೂರು ದಾಖಲಾಗಿತ್ತು. ಪ್ರಜ್ವಲ್ ರೇವಣ್ಣ ಚುನಾವಣಾ ಏಜೆಂಟ್ ನೀಡಿದ ದೂರಿನ ಆಧಾರದಲ್ಲಿ ಎಫ್ಐಎರ್ ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ಸಂಬಂಧಿಸಿದ್ದು ಎನ್ನಲಾದ ವಿಡಿಯೋಗಳನ್ನು ಲೀಕ್ ಮಾಡುವ ಮೊದಲು ನವೀನ್ ಗೌಡ ಫೇಸ್‌ಬುಕ್ ಮೂಲಕ ಪೋಸ್ಟ್ ಹಾಕಿದ್ದ ಅನ್ನೋ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇಷ್ಟೇ ಅಲ್ಲ ಪ್ರಜ್ವಲ್ ರೇವಣ್ಣ ವಿಡಿಯೋ ನೋಡಲು ವ್ಯಾಟ್ಸಆ್ಯಪ್ ಚಾನೆಲ್ ಫಾಲೋ ಮಾಡಿ ಎಂದು ಪೋಸ್ಟ್ ಹಾಕಲಾಗಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ. ಇದಾದ ಬಳಿಕ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಬಿಡುಗಡೆ ಗೆ ಕ್ಷಣ ಗಣನೆ ಎಂದು ಎರಡನೆ ಫೋಸ್ಟ್ ಹಾಕಲಾಗಿತ್ತು. ಪೋಸ್ಟ್ ಹಾಕಿದ್ದ ಬಗ್ಗೆ ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಲಾಗಿದೆ.
ಈತನ ಪೋಸ್ಟ್ ಹಾಗೂ ವೈರಲ್ ವಿಡಿಯೋಗೆ ಸಂಬಂಧ ಇದೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದೀಗ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!