ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್: ಎಸ್​ಪಿಪಿ ಹುದ್ದೆಗೆ ಜಾಯ್ನಾ ಕೊಥಾರಿ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಎಸ್​ಪಿಪಿ ಹುದ್ದೆಗೆ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ.

ಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡದ ಪರವಾಗಿ ಕೋರ್ಟ್​ನಲ್ಲಿ ವಾದಿಸಲು ರಾಜ್ಯ ಸರ್ಕಾರ ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್​ಪಿಪಿಯಾಗಿ ನೇಮಕ ಮಾಡಿತ್ತು. ಇದೀಗ ಜಾಯ್ನಾ ಕೊಥಾರಿ ಅವರು ಇಂದು(ಜೂನ್ 11) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ.
ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರಜ್ವಲ್ ರೇವಣ್ಣ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಆಗಿ ಬಿಎನ್ ಜಗದೀಶ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಬಳಿಕ ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್‌ನ್ನು ಸಮರ್ಥಿಸಲು ರಾಜ್ಯ ಸರ್ಕಾರವು, ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ಸರ್ಕಾರ ನೇಮಿಸಿತ್ತು. ಇದರ ಬೆನ್ನಲ್ಲೇ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಹೆಚ್ಚುವರಿ ಎಸ್‌ಪಿಪಿ ಜಾಯ್ನಾ ಕೊಥಾರಿ ಸಹ ರಾಜೀನಾಮೆ ನೀಡಿದ್ದು ಅಚ್ಚರಿ ಮೂಡಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!