ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಸಂತ್ರಸ್ತ ಮಹಿಳೆಯರಿಗಾಗಿ ಸಹಾಯವಾಣಿ ಆರಂಭಿಸಿದ ಎಸ್‌ಐಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಂತ್ರಸ್ತ ಮಹಿಳೆಯರಿಗೆ ಕಾನೂನಿನ ನೆರವು, ರಕ್ಷಣೆ ಅಥವಾ ಇನ್ನಿತರೆ ಸಹಾಯಕ್ಕಾಗಿ ಸಹಾಯವಾಣಿಯನ್ನು ಆರಂಭಿಸಿದೆ.

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಅತ್ಯಾಚಾರಕ್ಕೆ ಒಳಗಾದ ಮಹಿಳಯರಿಗೆ ರಕ್ಷಣೆ ನೀಡುವುದಕ್ಕೆ ಎಸ್‌ಐಟಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯರಿಗಾಗಿ ಎಸ್‌ಐಟಿ ಸಹಾಯವಾಣಿ ನಂಬರ್ 6360938947 ನೀಡಿದೆ. ವಿಶೇಷ ತನಿಖಾ ತಂಡದಿಂದ ಪ್ರಕಟಣೆ ಮೂಲಕ ಹೆಲ್ಪ್ ಲೈನ್ ಸಂಖ್ಯೆ ಬಿಡುಗಡೆ ಮಾಡಲಾಗಿದೆ.

ತನಿಖೆಯ ಸಂದರ್ಭದಲ್ಲಿ ಕಾನೂನಿನ ನೆರವು, ರಕ್ಷಣೆ ಮತ್ತು ಇನ್ನಿತರ ಸಹಾಯ ಬೇಕಾಗಿದ್ದಲ್ಲಿ ಸಹಾಯವಾಣಿಗೆ ಕರೆ ಮಾಡುವಂತೆ ಪ್ರಕಟಣೆ ನೀಡಲಾಗಿದೆ. ಜೊತೆಗೆ, ಸಂತ್ರಸ್ತರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎಸ್‌ಐಟಿ ಭರವಸೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!