ದಿಗಂತ ವರದಿ ಹಾಸನ :
ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಧಿಕೃತವಾಗಿ ಇಂದು ನಾಮಪತ್ರ ಸಲ್ಲಿಸಲಿದರು. ಮಾಜಿಪ್ರಧಾನಿ ಎಚ್.ಡಿ ದೇವೇಗೌಡರು ಆಗಮಿಸಿ ಸೂಚಕರಾಗಿ ಸಹಿ ಹಾಕಿ ತೆರಳಿದರು.
ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ ಇದಕ್ಕೂ ಮೊದಲು ಚುನಾವಣಾಧಿಕಾರಿಗಳ ಕಾರ್ಯಾಲಯದ ಒಳಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ, ಎಂಎಲ್‌ಸಿ ಸೂರಜ್‌ರೇವಣ್ಣ, ಮಾಜಿಜಿ.ಪಂ. ಭವಾನಿ ರೇವಣ್ಣ, ಮಾಜಿಸಿಎಂ ಡಿ.ವಿ.ಸದಾನಂಗೌಡ ಹೋಗಿ ಬಂದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಕರುಗಳಾದ ಸಿಮೆಂಟ್ ಮಂಜು, ಎಚ್.ಕೆ.ಸುರೇಶ್, ವಿಧಾನ ಪರಿಷತ್ ಉಪಾಸಭಾಪತಿ ಪ್ರಾಣೇಶ್ ಎಚ್.ಕೆ.ಕುಮಾರಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಸೇರಿದಂತೆ ಇತರರು ಹಾಜರಿದ್ದರು.