ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದೇಶದಲ್ಲಿರೋ ಪ್ರಜ್ವಲ್ ರೇವಣ್ಣ ವಾಪಸ್ ಬರಲು ಮುಹೂರ್ತ ಫಿಕ್ಸ್ ಆಗಿದೆ. ಜರ್ಮನಿಯ ಮ್ಯೂನಿಚ್ನಿಂದ ಟಿಕೆಟ್ ಬುಕ್ ಆಗಿರುವ ಮಾಹಿತಿ ಲಭ್ಯವಾಗಿದ್ದು, ಇದೇ ತಿಂಗಳ 31ರಂದು ಪ್ರಜ್ವಲ್ ಭಾರತಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಆದರೆ ಕಳೆದ ಬಾರಿಯಂತೆ ಕಡೆಯ ನಿಮಿಷದಲ್ಲಿಯೂ ಟಿಕೆಟ್ ಕ್ಯಾನ್ಸಲ್ ಮಾಡುವ ಸಾಧ್ಯತೆಯೂ ಇದೆ.
ಅಶ್ಲೀಲ ವಿಡಿಯೋ ಕೇಸ್ ಬೆಳಕಿಗೆ ಬರುತ್ತಿದ್ದಂತೆಯೇ ಪ್ರಜ್ವಲ್ ವಿದೇಶಕ್ಕೆ ಹಾರಿದ್ದರು. ಒಂದು ತಿಂಗಳ ಬಳಿಕ ವಿಡಿಯೋದಲ್ಲಿ ಪ್ರತ್ಯಕ್ಷರಾಗಿದ್ದ ಪ್ರಜ್ವಲ್ ರೇವಣ್ಣ ಸ್ವದೇಶಕ್ಕೆ ಬರೋದಾಗಿ ತಿಳಿಸಿದ್ದಾರೆ. ಮೇ 31ರಂದು ರಾಜಧಾನಿ ಬೆಂಗಳೂರಿಗೆ ಪ್ರಜ್ವಲ್ ಬರೋದು ಬಹುತೇಕ ಕನ್ಫರ್ಮ್ ಎನ್ನಲಾಗಿದೆ.
ಇನ್ನೂ ಮೇ 31ರ ಮಧ್ಯರಾತ್ರಿಯೇ ಪ್ರಜ್ವಲ್ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.