ಹೊಸದಿಗಂತ ವರದಿ ಹಾಸನ :
ಹಾಸನ ಲೋಕಸಭಾ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ, ಮೂಡಲಹಿಪ್ಪೆ ಗ್ರಾಮದ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ, ಜೆಡಿಎಸ್ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಮಾಜಿ ಸಚಿವ ರೇವಣ್ಣ, ಭವಾನಿ ರೇವಣ್ಣ, ಡಾ.ಸೂರಜ್ ರೇವಣ್ಣ ಕುಟುಂಬ ಸಮೇತರಾಗಿ ಭಾಗಿಯಾಗಿ ಚುನಾವಣೆ ಪ್ರಚಾರದ ನಿಮ್ಮಿತ್ತ ಇಂದು ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.
ಜೆಡಿಎಸ್ ಈಗಾಗಲೇ ಹಾಸನದಿಂದ ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಪ್ರಜ್ವಲ್ ರೇವಣ್ಣ ಬಿಜೆಪಿ ಪ್ರಮುಖಂಡರನ್ನು ಸೇರಿದಂತೆ ಪ್ರಮುಖರನ್ನು ಭೇಟಿ ಮಾಡಿ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದರು. ಪ್ರಚಾರ ವಾಹನಕ್ಕೆ ಇಂದು ಚಾಲನೆ ನೀಡಿದ್ದು ಅಭ್ಯರ್ಥಿ, ಕಾರ್ಯಕರ್ತರು, ಮುಖಂಡರು ಪ್ರಚಾರ ತೆರೆದ ವಾಹನದಲ್ಲಿ ಜಿಲ್ಲೆಯ ವಿವಿಧೆಡೆ ಪ್ರಚಾರ ಮಾಡಲಿದೆ.