ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಕಾಶ್ ರೈ ಅವರು ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು ಮತ್ತು ಜನಪ್ರಿಯರು. ಆದ್ದರಿಂದ ಅವರು ಬೇರೆಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕುಟುಕಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಮ್ಮಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗಾಗಿ ಕೇವಲ 1,282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ. ಪಕ್ಕದ ಆಂಧ್ರ ಪ್ರದೇಶದಲ್ಲಿ ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೇ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ. ಅಲ್ಲದ, ಆಂಧ್ರದಲ್ಲಿ ಬೇರೆಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದ್ರೆ ಪ್ರಕಾಶ್ ರೈಗೆ ಇವೆಲ್ಲ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿ ಕಿಡಿಕಾರಿದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ಬಹುಭಾಷಾ ನಟ ಪ್ರಕಾಶ್ ರೈಗೆ ಗೊತ್ತಿರಲಿಕ್ಕಿಲ್ಲ. ಬರಪೀಡಿತ ವಿಜಯಪುರ ಜಿಲ್ಲೆಯನ್ನು ನಾನು ಹೋರಾಡಿಯೇ ನೀರಾವರಿ ಭೂಮಿಯನ್ನಾಗಿ ಮಾಡಿದ್ದೇನೆ. ಪ್ರಕಾಶ್ ರೈ ಅವರು ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು ಮತ್ತು ಜನಪ್ರಿಯರು. ಆದ್ದರಿಂದ ಅವರು ಬೇರೆಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.
ಪ್ರಕಾಶ್ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇನೆ. ರೈತ ಮುಖಂಡ ಬಯ್ಯಾರೆಡ್ಡಿ ಅವರೇ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ದುರದೃಷ್ಟವಶಾತ್ ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲ ಅರಿಯಬೇಕು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ದೇವನಹಳ್ಳಿ ಕೃಷಿ ಭೂಮಿ ಸ್ವಾಧೀನಕ್ಕೆ ಪ್ರಕಾಶ್ ರಾಜ್ ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಎಂಬಿ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿ ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಕರ್ನಾಟಕದಲ್ಲಿ ಮಾತ್ರವಲ್ಲ, ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದು ಸವಾಲ್ ಎಸೆದಿದ್ದರು.
ಎಂಬಿಪಿ ಸವಾಲಿಗೆ ತಿರುಗೇಟು ನೀಡಿದ್ದ ಪ್ರಕಾಶ್ ರಾಜ್, ಇದು ದೇವನಹಳ್ಳಿ ರೈತರ ಸಮಸ್ಯೆ, ಎಲ್ಲೆಲ್ಲೋ ಮಾಡಲು ಸಾಧ್ಯವಿಲ್ಲ. ನಾವು ದೇಶದ ಹಲವು ಕಡೆ ಹೋರಾಟ ಮಾಡಿದ್ದೇವೆ. ತಮಿಳುನಾಡಿನ ರೈತರ ಪರ ದೆಹಲಿಯಲ್ಲಿ ಕುಳಿತವನು ನಾನೇ. ಪಂಜಾಬ್ ರೈತರು ಹೋರಾಟ ಮಾಡ್ದಾಗಲು ನಿಂತವನು ನಾನೇ, ನಾವು ಎಲ್ಲಾ ವಿಚಾರಗಳ ಬಗ್ಗೆ ಮಾತನಾಡುತ್ತೇವೆ. ಮೋದಿಯನ್ನು ನಿಮಗಿಂತ ಜಾಸ್ತಿ ನಾನು ಪ್ರಶ್ನೆ ಮಾಡಿದ್ದೇನೆ ಎಂದು ನೀಡಿದ್ದರು.
ಈ ರಾಜಕಾರಣಿಗಳಿಗೆ ಯಾವುದೇ ಯೋಜನೆಗಳ ಅನುಷ್ಠಾನಕ್ಕೆ ಗೋಚರಿಸುವುದು ಫಲವತ್ತಾದ ಕೃಷಿ ಭೂಮಿಯೇ.ಪ್ರಕಾಶ್ ರೈ ಏನೋ ಅಪರೂಪಕ್ಕೆ ಒಳ್ಳೆಯ ಕಾರ್ಯಕ್ಕಿಳಿದಿರುವರು.ಈ ರಾಜಕಾರಣಿಗಳ ಭೂಸ್ವಾಧೀನ ಪ್ರಕ್ರಿಯೆಯ ಒಳ ವ್ಯವಹಾರಗಳ ಪರಿಚಯ ದಶಕದಿಂದೀಚೆಗೆ ಸಾಮಾನ್ಯರಿಗೂ ಅರಿವಾಗಿದೆ. ಜಾಣರಿಗೊಂದು(ರಾಜಕಾರಣಿಗಳ ಬಾಲಗಳೂ ಸೇರಿ) ಮೌಲ್ಯ,ಇತರ ಯಾವುದೇ ರಾಜಕೀಯ ಗುರುತಿಸುವಿಕೆ ಇಲ್ಲದವರಿಗೊಂದು ಮೌಲ್ಯ