ಬಿಜೆಪಿಗೆ ಪ್ರಕಾಶ್ ರಾಜ್: ಜಾಲತಾಣಗಳ ‘ಜಸ್ಟ್ ಆಸ್ಕಿಂಗ್’ಗೆ ಏನಂದ್ರು ಬಹುಭಾಷಾ ನಟ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಸೇರ್ಪಡೆ ಕುರಿತಾದ ವದಂತಿಗಳಿಗೆ ಬಹುಭಾಷಾ ಚಿತ್ರನಟ ಪ್ರಕಾಶ್ ರಾಜ್, ತಮ್ಮ ಎಂದಿನ ಶೈಲಿಯಲ್ಲಿ ತೆರೆ ಎಳೆದಿದ್ದಾರೆ.

ಸಿನೆಮಾ ನಟನೆಗಿಂತ ಕೇಂದ್ರ ಸರ್ಕಾರದ ವಿರುದ್ಧದ ಹೇಳಿಕೆಗಳಿಗೇ ಹೆಚ್ಚು ಸುದ್ದಿಯಾಗುತ್ತಿರುವ ನಟ ಪ್ರಕಾಶ್ ರಾಜ್, ಬಿಜೆಪಿಗೆ ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿ ವೈರಲ್ ಆಗುತ್ತಿದೆ.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರೊಬ್ಬರ ‘ಬಿಜೆಪಿ ಸೇರ್ಪಡೆ’ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಪ್ರಕಾಶ್ ರಾಜ್, ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮ್ಮ ಅಭಿಪ್ರಾಯವೇನು ಸ್ನೇಹಿತರೇ. ಜಸ್ಟ್ ಆಸ್ಕಿಂಗ್ ಎನ್ನುವ ಮೂಲಕ ಬಿಜೆಪಿ ಸೇರುವ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here