ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ನ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
ಬಾದಲ್ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ವಾರವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು.
ಬಾದಲ್ ಅವರು ಐದು ಬಾರಿ ಪಂಜಾಬ್ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು.