ಹೊಸದಿಗಂತ ವರದಿ ಹುಬ್ಬಳ್ಳಿ:
ಬಿಜೆಪಿ ವತಿಯಿಂದ ಡಿ.18 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಗಾಯತ್ರಿ ವಿಹಾರ ಅರಮನೆ ಮೈದಾನದಲ್ಲಿ ಪ್ರಕೋಷ್ಟಗಳ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ರಾಜ್ಯ ಪ್ರಕೋಷ್ಟ ರಾಜ್ಯಾಧ್ಯಕ್ಷ ಜಯತೀರ್ಥ ಕಟ್ಟಿ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ಸಮಾವೇಶದ ಉದ್ಘಾಟನೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಡುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ, ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಭಾಗವಹಿಸುವರು.
ಹಾಲು ಉತ್ಪಾದಕಕರ ಪ್ರಕೋಷ್ಟ, ವೈದ್ಯಕೀಯ ಪ್ರಕೋಷ್ಟ, ಸಹಾಕಾರಿ, ಗ್ರಾಮೀಣ ಸೇರಿ ಸುಮಾರು 25 ಪ್ರಕೋಷ್ಟದ 15 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಧಾರವಾಡ ಜಿಲ್ಲೆಯಿಂದ ಸಾವಿರ ಕಾರ್ಯಕರ್ತರು ಭಾಗವಹಿಸುವರು ಎಂದು ತಿಳಿಸಿದರು.
ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಮಹಾನಗರದ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಚಂದ್ರಶೇಖರ ಗೋಕಾಕ, ರಂಗಾ ಬದ್ದಿ ಇದ್ದರು.