ಹೊಸದಿಗಂತ ವರದಿ, ಹುಬ್ಬಳ್ಳಿ:
ಸರ್ಕಾರ ಬಂದು ಮೂರು ತಿಂಗಳೂ ಸಹ ಆಗಿಲ್ಲ. ಆದರೆ ಅಧಿಕಾರಿಗಳ ವರ್ಗಾವಣೆಯಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಸ್ವತಃ ಆ ಪಕ್ಷದ ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವುದು ಬಹಿರಂಗವಾಗಿದೆ ಎಂದರು.
ಈ ವೇಳೆ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಮಾತನಾಡಿ, ರಾಹುಲ್ ಗಾಂಧಿಯವರ ಶಿಕ್ಷೆಯನ್ನು ಕೋರ್ಟ್ ತಡೆದಿದೆಯೇ ಹೊರೆತು, ಅವರು ಮಾಡಿದ್ದು ಸರಿ ಅಂತ ಒಪ್ಪಿಕೊಂಡಿಲ್ಲ. ಮಾತನಾಡಿದ್ದು ತಪ್ಪು ಅಂತ ಹೇಳಿದೆ ಎಂದು ಹೇಳಿದರು.
ನ್ಯಾಯಾಲಯದ ತೀರ್ಪು ಆಧರಿಸಿ ರಾಹುಲ್ ಗಾಂಧಿ ಸದಸ್ಯತ್ವದ ಬಗ್ಗೆ ಸ್ಪೀಕರ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ಯಾವುದೇ ರಾಜಕೀಯ ಇಲ್ಲ. ಅದು ನ್ಯಾಯಾಲಯದ ವಿಚಾರ ಎಂದು ತಿಳಿಸಿದರು.