ದಿಗಂತ ವರದಿ ಧಾರವಾಡ:
ಪ್ರತಿಷ್ಠಿತ ಕಣದಲ್ಲಿ ಒಂದಾದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಕಾಂಗ್ರೆಸ್ ನ ವಿನೋದ ಅಸೂಟಿ ಹಿನ್ನಡೆ ಅನುಭವಿಸಿದ್ದಾರೆ. ಜೋಶಿ 3,06,687 ಮತ ಪಡೆದು, 60 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
2,46,121 ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಬಾರಿ ಅಂತರದ ಹಿನ್ನಡೆ ಅನುಭವಿಸಿದ್ದು, ಕೇಂದ್ರದ ಹೊರಗಡೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದೆ.