ಗೋವಾ ನೂತನ ಮುಖ್ಯಮಂತ್ರಿಯಾಗಿ ಪ್ರಮೋದ್​ ಸಾವಂತ್ ಪುನರಾಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಉತ್ತರಾಖಂಡ್​ ಸಿಎಂ ಆಯ್ಕೆ ಬೆನ್ನಲ್ಲೇ ಗೋವಾ ನೂತನ ಮುಖ್ಯಮಂತ್ರಿಯನ್ನು ಬಿಜೆಪಿ ಆಯ್ಕೆಮಾಡಿದ್ದು, ಹಂಗಾಮಿ ಮುಖ್ಯಮಂತ್ರಿ ಪ್ರಮೋದ್​ ಸಾವಂತ್ ಅವರನ್ನೇ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಸಲು ನಿರ್ಧರಿಸಲಾಗಿದೆ.
ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ಬಿಜೆಪಿ ಹೈಕಮಾಂಡ್​​ ವೀಕ್ಷಕರನ್ನಾಗಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಎಲ್.ಮುರುಗನ್ ಅವರನ್ನು ಗೋವಾಗೆ ಕಳುಹಿಸಿತ್ತು.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಪ್ರಮೋದ್​ ಸಾವಂತ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!