ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳವಾರ ಪಾಟ್ನಾದ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ.
ನಿರ್ಜಲೀಕರಣ ಮತ್ತು ಸೋಂಕಿನಿಂದ ಬಳಲುತ್ತಿದ್ದ ಪ್ರಶಾಂತ್ ಕಿಶೋರ್ ಅವರನ್ನು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಆಸ್ಪತ್ರೆಗೆ ದಾಖಲಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕಿಶೋರ್, “ನನ್ನ ಆಮರಣಾಂತ ಉಪವಾಸ ಮುಂದುವರಿಯುತ್ತದೆ” ಎಂದು ಹೇಳಿದರು.