ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೈರೆಕ್ಟರ್ ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್‌ಟಿಆರ್ ಜೋಡಿಯ ಚಿತ್ರವೊಂದರ ಕೆಲಸ ಭರದಿಂದಲೇ ನಡೆಯುತ್ತಿದ್ದು, ಈ ಮಧ್ಯೆ ಪ್ರಶಾಂತ್ ನೀಲ್ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ.
ಈ ಸಿನಿಮಾಕ್ಕೆ NTRNEEL ಅನ್ನುವ ಟೈಟಲ್ ಇಟ್ಟಿದ್ದಾರೆ. ಈ ಟೈಟಲ್ ಅಲ್ಲಿಯೇ ಚಿತ್ರೀಕರಣವೂ ನಡೆಯುತ್ತಿದೆ. ಆದರೂ, ಚಿತ್ರಕ್ಕೆ ಟೈಟಲ್ ಇಡದೇನೆ ಇದೀಗ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ. ಮುಂದಿನ ವರ್ಷ 2026 ಜೂನ್-25 ರಂದು ವಿಶ್ವದಾದ್ಯಂತ ಈ ಚಿತ್ರ ರಿಲೀಸ್ ಆಗುತ್ತಿದೆ.
ಜೂನಿಯರ್ ಎನ್‌ಟಿಆರ್ ಹಾಗೂ ಪ್ರಶಾಂತ್ ನೀಲ್ ಜೋಡಿಯ ಈ ಚಿತ್ರ ಆ್ಯಕ್ಷನ್ ಪ್ಯಾಕ್ಡ್ ಸಿನಿಮಾನೇ ಆಗಿದೆ. ಕೆಜಿಎಫ್ ಚಿತ್ರಕ್ಕೆ ಕೆಲಸ ಮಾಡಿರೋ ಭುವನ್ ಗೌಡ ಈ ಚಿತ್ರಕ್ಕೆ ಕ್ಯಾಮರಾವರ್ಕ್ ಮಾಡುತ್ತಿದ್ದಾರೆ. ರವಿ ಬಸ್ರೂರು ಈ ಚಿತ್ರಕ್ಕೂ ಸಂಗೀತ ಕೊಡುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಮತ್ತು NTR ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಹಾಗೂ ಹರಿ ಕೃಷ್ಣ ಕೊಸರಾಜು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರ ಬಹು ಭಾಷೆಯಲ್ಲಿಯೇ ರಿಲೀಸ್ ಆಗಲಿದೆ ಎಂದು ಚಿತ್ರ ತಂಡ ಹೇಳಿದೆ.