ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಾಪ್ ಸಿಂಹ ಅವರು ಕಳೆದ 10 ವರ್ಷಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿ ಅವರಿಗೆ ಖಂಡಿತ ಟಿಕೆಟ್ ಸಿಕ್ಕೆ ಸಿಗುತ್ತೆ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ಹೇಳಿದ್ದಾರೆ.
ಕಳೆದ ಎರಡು ಚುನಾವಣೆಗಳಲ್ಲಿ ನಾನು ಪ್ರತಾಪ್ ಸಿಂಹ ಅವರನ್ನು ಬೆಂಬಲಿಸಿದ್ದೆ, ನಾನು ಈಗಲೂ ಅವರನ್ನು ಬೆಂಬಲಿಸುತ್ತೇನೆ. ಟಿಕೆಟ್ ಸಿಗುವುದು ಖಚಿತ ಎಂದು ತಿಳಿಸಿದ್ದಾರೆ.
ಟಿಕೆಟ್ ತಪ್ಪುತ್ತೆ ಎಂಬ ವಿಚಾರದ ಬಗ್ಗೆ ನನಗೆ ತಿಳಿದಿಲ್ಲ. ಆದರೆ ತುಳಿಸಿ ದಾಸಪ್ಪ ನಂತರ ಮೈಸೂರಿನಿಂದ ಒಕ್ಕಲಿಗರ ಪ್ರತಿನಿಧಿಯಾಗಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುವುದರ ಬಗ್ಗೆ ವಿಶ್ವಾಸ ಇದೆ ಎಂದು ಹೇಳಿದ್ದಾರೆ.