ಹೊಸದಿಗಂತ ವರದಿ ಬಾಗಲಕೋಟೆ :
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ತಾಲೂಕ ಘಟಕ ಬಾಗಲಕೋಟೆ, ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಘಟಕ ಹಾಗೂ ತಾಲೂಕ ಘಟಕ ಬಾಗಲಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ನೂತನ ಸಚಿವರಿಗೆ ಹಾಗೂ ಶಾಸಕರಿಗೆ ಸತ್ಕಾರ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ಇಂದು ನಡೆದ ಕಾರ್ಯಕ್ರಮವನ್ನು ನಾಡಿನ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಹುಸಿಗೊಳಿಸಿದೆ ಅವರ ನಂಬಿಕೆಗೆ ತಕ್ಕಂತೆ ಸೇವೆಯನ್ನು ಮಾಡುವ ಮೂಲಕ ಉತ್ತಮ ಜನನಾಯಕರಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು.
ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಮುಂದೆಯೂ ಕೂಡ ಉತ್ತಮ ಓದಿನಲ್ಲಿ ತೊಡಗಿಕೊಂಡು ಪ್ರತಿಭಾಮಂತ ವಿದ್ಯಾರ್ಥಿಗಳಾಗಿ ನಿಮ್ಮಿಷ್ಟದ ಕ್ಷೇತ್ರಗಳಿಗೆ ನಿಮ್ಮನ್ನು ನೀವು ತೊಡಗಿಕೊಂಡು ನಾಡಿನ ಸೇವಕರಾಗಿ, ದೇಶದ ಅಭಿವೃದ್ಧಿಗಾಗಿ ನಿಮ್ಮ ಕೊಡುಗೆಯನ್ನು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.