Wednesday, September 27, 2023

Latest Posts

ಕಾರ್ಮಾರು ಶ್ರೀ ವನಶಾಸ್ತಾರ ದೇವರ ಪ್ರತಿಷ್ಠಾ ಕಲಶ ಸಂಪನ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾನ್ಯ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಪ್ರಗತಿಯಲ್ಲಿದ್ದು ಗುರುವಾರ ಶ್ರೀ ವನಶಾಸ್ತಾರ ದೇವರ ಪ್ರತಿಷ್ಠೆ, ಕಲಶಾಭಿಷೇಕ ಜರಗಿತು. ಬೆಳಗ್ಗೆ ೮.೨೦ರಿಂದ ೯.೧೭ರ ಮಿಥುನ ಲಗ್ನ ಸುಮುಹೂರ್ತದಲ್ಲಿ ಪ್ರಭಾಸತ್ಯಕ ಸಹಿತ ಶ್ರೀ ವನಶಾಸ್ತಾರ ದೇವರ ಪ್ರತಿಷ್ಠೆ, ಕಲಶಾಭಿಷೇಕ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರು. ಬುಧವಾರ ಸಂಜೆ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಆಚಾರ್ಯವರಣ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ರಾಕ್ಷೆಘ್ನ ಹೋಮ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ವನದುರ್ಗಾ ಹೋಮ, ವಾಸ್ತುಬಲಿ ನಡೆಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!