ಪ್ರವೀಣ್ ಪತ್ನಿಗೆ ಅನುಕಂಪದ ಆಧಾರದ ಮೇಲೆ ಮತ್ತೆ ಉದ್ಯೋಗ ನೀಡಿ: ನಳಿನ್ ಆಗ್ರಹ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿ ಕಟ್ಟಿ ಹಾಕುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಹಲ್ಲೆ, ಹತ್ಯೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ. ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ ಎಂದು ಆರೋಪಿಸಿದರು.

ದ್ವೇಷದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್‌ಐಆರ್ ಮಾಡಲಾಗಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಹಾಕಲಾಗಿದೆ. ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿಯನ್ನು ಕಟ್ಟಿಹಾಕುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಹಲ್ಲೆ ಹತ್ಯೆ ಮಾಡುತ್ತಿದೆ ಎಂದು ಆರೋಪಿಸಿದರು.

ನೆಟ್ಟಾರ್ ಪತ್ನಿಗೆ ಉದ್ಯೋಗ ನೀಡಿ

ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಹೀಗಾಗಿ ಅನುಕಂಪದ ಆಧಾರದ ಮೇಲೆ ಮತ್ತೆ ಉದ್ಯೋಗ ನೀಡಿ ಎಂದು ಸಿಎಂ ಸಿದ್ಧರಾಮಯ್ಯಗೆ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದರು. ನೀವು ಉದ್ಯೋಗ ನೀಡದಿದ್ದರೂ ಕೇಂದ್ರದ ಎನ್‌ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದು ಇದೇ ವೇಳೆ ಕಟೀಲ್ ಹೇಳಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ಎಚ್ಚರಿಸಿದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!