Friday, August 19, 2022

Latest Posts

ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ: ಬಿಜೆಪಿ ಜಿಲ್ಲಾ ಮಟ್ಟದ ನಾಯಕರ ಸಾಮೂಹಿಕ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವೀಣ್ ಹತ್ಯೆಯ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ.ತಮ್ಮದೇ ಪಕ್ಷ ಆಡಳಿತದಲ್ಲಿದ್ದರೂ ಪಕ್ಷದ ಕಾರ್ಯಕರ್ತರು, ಸೈದ್ಧಾಂತಿಕ ಬೆಂಬಲಿಗರ ಸಾಲು ಸಾಲು ಹತ್ಯೆಗಳಾಗುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಜಿಲ್ಲಾ ಮಟ್ಟದ ಹಲವು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂದೀಪ್ ಹರವಿನಂಗಡಿ ಬಿಜೆಪಿಯ ಸಿದ್ಧಾಂತಕ್ಕಾಗಿ ಅನೇಕ ಕಾರ್ಯಕರ್ತರ ಬಲಿದಾನನಡೆದಿರುವಂಥಹದ್ದು ಇತಿಹಾಸವಾದರೆ, ಇಂದಿನ ಕಾಲಘಟ್ಟದಲ್ಲೂ ಕೂಡಾ ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದಿರುವುದು ಕಾರ್ಯಕರ್ತರಿಗೆ ನೋವಾಗುತ್ತಿದೆ. ಪ್ರವೀಣ್ ನೆಟ್ಟಾರ್ ಸಾವು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿಯೇ ಉಳಿದಿರುವ ಕಾರಣ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚ ಅಧ್ಯಕ್ಷ ಹುದ್ದೆಯಾದಿಯಾಗಿ ಯುವಮೋರ್ಚಾದ ಎಲ್ಲಾ ಪದಾಧಿಕಾರಿಗಳು ಹಾಗೂ 9 ಮಂಡಲದ ಅಧ್ಯಕ್ಷರು ಸೇರಿ ಎಲ್ಲರೂ ಪಕ್ಷದ ಜವಾಬ್ದಾರಿಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ರಾಜರಾಜೇಶ್ವರಿ ನಗರ ಮಂಡಲದ ಸಾಮಾಜಿಕ ಜಾಲತಾಣದ ಸಂಚಾಲಕನ ಹುದ್ದೆಗೆ ಶ್ರೀನಿವಾಸ್ ಗೌಡ ಅವರು ರಾಜೀನಾಮೆ ನೀಡಿದ್ದರೆ, ಚಿಕ್ಕಮಗಳೂರು ಜಿಲ್ಲಾ ಮಾಧ್ಯಮ ಪ್ರಮುಖರಾದ ಪ್ರೀತಮ್ ಹೆಬ್ಬಾರ್ ಅವರೂ ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!