Thursday, August 11, 2022

Latest Posts

ಪ್ರವೀಣ್ ಹತ್ಯೆ ಪ್ರಕರಣ: ಡಿಜಿಪಿ ಪ್ರವೀಣ್ ಸೂದ್ ​ಗೆ ಸಿಎಂ ಬೊಮ್ಮಾಯಿ‌ ತರಾಟೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವೀಣ್ ಹತ್ಯೆ ಪ್ರಕರಣ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಜಿಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ .

ಶನಿವಾರ ಬೆಳಗ್ಗೆ ಡಿಜಿಪಿ ಪ್ರವೀಣ್ ಸೂದ್ ಹಾಗೂ ಗುಪ್ತಚರ ಇಲಾಖೆ ಮುಖ್ಯಸ್ಥ ಬಿ. ದಯಾನಂದ್ ರೇಸ್ ವಿವ್ ನಿವಾಸದಲ್ಲಿ ಸಿಎಂ ಬೊಮ್ಮಾಯಿ‌ ಅವರನ್ನು ಭೇಟಿಯಾದರು. ಈ ವೇಳೆ ಸಿಎಂ ಬೊಮ್ಮಾಯಿ‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತ ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸದ ಎದುರು ಎಬಿವಿಪಿ ಪ್ರತಿಭಟನೆಯ ಬಗ್ಗೆ ರಾಜ್ಯ ಗುಪ್ತಚರ ವಿಭಾಗ, ಪೊಲೀಸ್ ವಿಭಾಗಗಳಿಗೆ ಮಾಹಿತಿಯೇ ಗೊತ್ತಿಲ್ಲ. ಹೀಗಾಗಿ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. ಪೊಲೀಸ್ ತನಿಖೆಯ ವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ನಾಲ್ಕು ದಿನಗಳಾಗಿದರೂ ಆರೋಪಿಗಳನ್ನು ಬಂಧಿಸಿಲ್ಲ. ಯಾವ ರೀತಿ ತನಿಖೆ ಮಾಡುತ್ತಿದ್ದೀರಾ ಎಂದು ಗರಂ ಆಗಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss