ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪುತ್ತೂರು, ಸುಳ್ಯದ 32 ಸ್ಥಳಗಳಿಗೆ ಎನ್ಐಎ ದಾಳಿ

ಹೊಸದಿಗಂತ ವರದಿ, ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಪುತ್ತೂರಿನ‌ ಹಲವು ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ ಇಂದು ದಿಢೀರ್ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯವಮುಂದಾಳು ಪ್ರವೀಣ್ ನೆಟ್ಟಾರು (34) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಮುಂದಾಗಿರುವ ಎನ್ ಐಎ, ಇಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳಿಗೆ ದಾಳಿ ನಡೆಸಿದ್ದು, ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಎನ್ಐಎ ಅಧಿಕಾರಿಗಳ ತನಿಖೆಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!